ಉಡುಪಿ: ಕುತ್ಪಾಡಿ ಪಡುಕೆರೆ ಕಡಲ ತಡಿಯಲ್ಲಿ ಕಡಲ ಕೊರೆತ ತಡೆಗೊಡೆಗೆ, ಹಾಕಿದ ಕಲ್ಲುಗಳ ಸಂದಿಯಲ್ಲಿ ಸುಮಾರು 40 ವರ್ಷ ಪ್ರಾಯದ ಅಪರಿಚಿತ ಮಹಿಳೆಯ ಶವವು ಪತ್ತೆಯಾದ ಘಟನೆ ಮಂಗಳವಾರ ಬೆಳಗಿನ ಜಾವ ನಡಿದೆ.
ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲಾಗಿದೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರಸುದಾರರು ನಗರ ಠಾಣೆ ಅಥವ, ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಸಂಪರ್ಕಿಸ ಬಹುದು. ಶವ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಉಚಿತ ಅಂಬುಲೇನ್ಸ್ ಸೇವೆ ನೀಡಿ ಇಲಾಖೆಗೆ ಸಹಕರಿಸಿದ್ದಾರೆ.