ಉಡುಪಿ ಜಿಲ್ಲಾ ಸಂಪ್ರದಾಯಬದ್ಧ ಕಂಬಳ ಸಮಿತಿಯಿಂದ ಡಿಸಿಗೆ ಮನವಿ.

ಉಡುಪಿ: ಉಡುಪಿ ಜಿಲ್ಲಾ ಸಂಪ್ರದಾಯಬದ್ಧ ಕಂಬಳ ಸಮಿತಿ ವತಿಯಿಂದ ಜಿಲ್ಲೆಯ ಸಂಪ್ರದಾಯಬದ್ಧ ಕಂಬಳಗಳ ವಿವರ ಹಾಗೂ ಸರಕಾರದಿಂದ ಅನುದಾನ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರಿಗೆ ಇಂದು ಮನವಿ ಸಲ್ಲಿಸಲಾಯಿತು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಮುಂದಿನ ದಿನಗಳಲ್ಲಿ ಅನುದಾನದ ಬಗ್ಗೆ ಸರಕಾರ ದೊಂದಿಗೆ ಸಮಾಲೋಚಿಸಿ ವ್ಯವಸ್ಥೆಗೊಳಿಸುವ ಬಗ್ಗೆ ಹಾಗೂ ಈ ಬಾರಿಯ ಸಂಪ್ರದಾಯಬದ್ಧ ಕಂಬಳ ವೀಕ್ಷಣೆಗೂ ಬರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷ ಸುಧಾಕರ್ ಹೆಗ್ಡೆ ಹೆರಂಜೆ ದೊಡ್ಡಮನೆ ಹಾಗೂ ಸಮಿತಿಯ ಕಾನೂನು ಸಲಹೆಗಾರ ಚೇರ್ಕಾಡಿ ದೊಡ್ಡಮನೆ ಪ್ರೇಮ್‌ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.