Home Trending ಕಿರು ಉದ್ದಿಮೆ ಸ್ಥಾಪನೆ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳುವ ಬಗ್ಗೆ ಆಸಕ್ತರಿಂದ ಅರ್ಜಿ ಆಹ್ವಾನ

ಕಿರು ಉದ್ದಿಮೆ ಸ್ಥಾಪನೆ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳುವ ಬಗ್ಗೆ ಆಸಕ್ತರಿಂದ ಅರ್ಜಿ ಆಹ್ವಾನ

ಉಡುಪಿ ಜೂನ್ 11: 2020-21 ನೇ ಸಾಲಿನಲ್ಲಿ ನಗರ ವ್ಯಾಪ್ತಿಯಲ್ಲಿ ಡೇ-ನಲ್ಮ್ ಅಭಿಯಾನದಡಿ ಕಿರು ಉದ್ದಿಮೆ ಸ್ಥಾಪನೆ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳಲು ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟಿಯ ನಗರ ಜೀವನೋಪಾಯ ಅಭಿಯಾನದಡಿ ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಆಸಕ್ತ ನಿವಾಸಿಗಳಿಂದ ಸ್ವಯಂ ಉದ್ಯೋಗ ಮತ್ತು ಗುಂಪು ಉದ್ಯಮ ಚಟುವಟಿಕೆ ಪ್ರಾರಂಭಿಸುವ ಕುರಿತು ಸಾಲ ಬಡ್ಡಿ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.

ಸ್ವಸಹಾಯ ಗುಂಪುಗಳಿಗೆ ಆವರ್ತಕ ನಿಧಿ ಬ್ಯಾಂಕ್ ಲಿಂಕೇಜ್ ಕೌಶಲ್ಯ ಅಭಿವೃದ್ಧಿ ತರಬೇತಿ ಮೂಲಕ ಉದ್ಯೋಗವಕಾಶ, ನಗರ ಬೀದಿ ಬದಿ ವ್ಯಾಪಾರಸ್ಥರಿಗೆ ಬೆಂಬಲ, ನಗರ ವಸತಿ ರಹಿತರಿಗೆ ಆಶ್ರಯ ನೀಡುವ ಕಾರ್ಯಕ್ರಮಗಳನ್ನು ಅಭಿಯಾನದಡಿ ಹಮ್ಮಿಕೊಳ್ಳಲು ಗುರಿಯನ್ನು ನಿಗದಿಪಡಿಸಲಾಗಿರುತ್ತದೆ.

ಕಾರ್ಯಕ್ರಮಗಳ ಪ್ರಯೋಜನೆ ಪಡೆಯಲು ಹಾಗೂ ಹೆಚ್ಚಿನ ಮಾಹಿತಿ ಪಡೆದು ಆರ್ಥಿಕವಾಗಿ ಹಿಂದುಳಿದ ಮತ್ತು ಬಿ.ಪಿ.ಎಲ್ ಕಾರ್ಡ್ ದಾರರು ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಉಡುಪಿ ನಗರಸಭೆ, ಕಾರ್ಕಳ, ಕುಂದಾಪುರ, ಕಾಪು ಪುರಸಭೆ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ, ಪೌರಾಯುಕ್ತರು, ಸಮುದಾಯ ಸಂಘಟನಾಧಿಕಾರಿಗಳನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಉಡುಪಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!