ಉಡುಪಿ, ಆಗಸ್ಟ್18: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಸ್ತಕ ಸಾಲಿನ ವಿಶೇ಼ಷ ಘಟಕ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ 2019 ನೇ ಸಾಲಿಗೆ ಅಂತರಾಷ್ಟೀಯ, ರಾಷ್ಟೀಯ, ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾ ಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಮತ್ತು ಜಿಮ್ ಸ್ಥಾಪನೆಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https://karunadu.karnataka.gov.in/dyes ಅಥವಾ ಸಹಾಯಕ ನಿರ್ದೇಶಕರು ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ :0820-2521324, 9480886467ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.