ಹೆಬ್ರಿ : ಜಿಲ್ಲೆಯ ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆರೆಬೆಟ್ಟು ಗ್ರಾಮದ ಸ.ನಂ. 79/2 ರಲ್ಲಿ ಸರ್ಕಾರಿ ಗೋಶಾಲೆಯ ನಿರ್ವಹಣೆಯನ್ನು ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ನಡೆಸುವ ಕುರಿತು ಆಸಕ್ತಿಯುಳ್ಳ ಗೋಶಾಲಾ ವ್ಯವಸ್ಥಾಪಕರನ್ನು ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 4 ಕೊನೆಯ ದಿನ. ಆಸಕ್ತಿಯುಳ್ಳವರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2534024 ಅನ್ನು ಅಥವಾ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.