ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ಡಿ-ಸಿಇಟಿ, ಪಿಜಿ-ಸಿಇಟಿ, ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಎಸ್.ಸಿ ಇನ್ ಹರ್ಟಿಕಲ್ಚರ್, ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಡೈರಿ ಟೆಕ್ನಾಲಜಿ, ಫಾರೆಸ್ಟ್ರಿ, ವೆಟರ್ನರಿ ಎಂಡ್ ಅನಿಮಲ್ ಟೆಕ್ನಾಲಜಿ, ಫಿಶರೀಸ್, ಸೆರಿಕಲ್ಚರ್, ಹೋಮ್/ ಕಮ್ಯುನಿಟಿ ಸೈನ್ಸಸ್, ಫುಡ್ ನ್ಯುಟ್ರಿಷನ್ ಎಂಡ್ ಡಯಟಿಕ್ಸ್, ಬಿ.ಫಾರ್ಮಾ, ಎಮ್.ಫಾರ್ಮಾ, ಫಾರ್ಮಾ ಡಿ ಮತ್ತು ಡಿ.ಫಾರ್ಮಾ ಗಳಲ್ಲಿ ಆಯ್ಕೆಯಾಗಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರಿವು (ರಿನೀವಲ್) ಸಾಲ ಪಡೆಯಲು ನಿಗಮದ ವೆಬ್ಸೈಟ್
https://kmdconline.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ಸಹಾಯವಾಣಿ ಸಂಖ್ಯೆ :8277799990, ದೂರವಾಣಿ ಸಂಖ್ಯೆ:0820-2574990 ಅಥವಾ ಅಥವಾ ಉಡುಪಿ ದೂ.ಸಂಖ್ಯೆ: 0820- 2574596, ಕಾರ್ಕಳ ದೂ.ಸಂಖ್ಯೆ : 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.