ವಿವಿಧೆಡೆ ಐ.ಟಿ.ಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೈಂದೂರು

ಬೈಂದೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಎನ್.ಸಿ.ವಿ.ಟಿ ಸಂಯೋಜನೆ
ಹೊಂದಿರುವ ಎಲೆಕ್ಟ್ರಿಷಿಯನ್ ಮತ್ತು ಫಿಟ್ಟರ್ ವೃತ್ತಿಗಳಿಗೆ ಹಾಗೂ ಉದ್ಯೋಗ ಯೋಜನೆಯ ಟಾಟಾ ಟೆಕ್ನಾಲಜೀಸ್ ಸಹಯೋಗದೊಂದಿಗೆ ಇಂಡಸ್ಟ್ರಿಯಲ್ ರೋಬೋಟಿಕ್ಸ್ ಮತ್ತು ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಮತ್ತು ಮೆಷಿನ್ ಎಲೆಕ್ಟ್ರಿಕ್ ವೆಹಿಕಲ್ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ www.cite.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಣಿಪಾಲ

ಪ್ರಸಕ್ತ ಸಾಲಿನಲ್ಲಿ ಉಡುಪಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ತಾಂತ್ರಿಕ ಕೋರ್ಸುಗಳ
ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ www.cite.karnataka.gov.in ಅಥವಾ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2986145, ಮೊ.ನಂ. 9900329668, 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಕ್ಕರ್ಣೆ

ಕೊಕ್ಕರ್ಣೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಫಿಟ್ಟರ್ ಹಾಗೂ ಇಲೆಕ್ಟ್ರಿಷಿಯನ್ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಪಿ.ಯು.ಸಿ ಅನುತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9483593148 ಮತ್ತು 8277558812 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಕ್ಕರ್ಣೆ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.