ಮೈಸೂರು: ಮೈಸೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎರಡು ವರ್ಷ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಾತಿಗೆ ಪಿ.ಜಿ.ಸಿ.ಇ.ಟಿ ಬರೆದಿರುವ /ಬರೆಯದ, ಬಿ.ಇ., ಮೆಕ್ಯಾನಿಕಲ್, ಇಂಡಸ್ಟಿçಯಲ್ ಪ್ರೊಡಕ್ಷನ್, ಆಟೋಮೊಬೈಲ್, ಆಟೋಮೇಷನ್ ಮತ್ತು ರೋಬೋಟಿಕ್ಸ್ ಇಂಜಿನಿಯರಿಂಗ್ ಮುಂತಾದವುಗಳಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಫ್ಲಾಟ್ ನಂ. 93 ಮತ್ತು 94, ಬೆಳಗೊಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್ ರಸ್ತೆ, ಮೈಸೂರು ಮೊಬೈಲ್ ನಂ. 8762140256, 9243989954 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.