ಉಡುಪಿ: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನ ‘ಸಂಯಮ ಪ್ರಶಸ್ತಿಗೆ’ ಅರ್ಜಿ ಆಹ್ವಾನಿಸಲಾಗಿದೆ.
ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವಿಶಿಷ್ಠ ಸಾಧನೆ ಮಾಡಿರುವ ಸಾಧಕರು ಹಾಗೂ ಸಂಘ ಸಂಸ್ಥೆಗಳು 2024 ರ ಜನವರಿ 15 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಇ-ಮೇಲ್ [email protected] , ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮದ್ಯಪಾನ
ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6ನೇ ಮಹಡಿ, ಡಾ.ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು- 560 001 ಈ ವಿಳಾಸಕ್ಕೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.