ಕೇಂದ್ರ ಸರ್ಕಾರದ ಗೃಹ ಇಲಾಖೆಯಡಿ ಬರುವ ಇಂಡೋ- ಟಿಬೆಟಿಯನ್ ಗಡಿ ಭದ್ರತಾ ಪಡೆ (ಐಟಿಬಿಪಿ)ಯಲ್ಲಿ ಖಾಲಿ ಇರುವ 458 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಐಟಿಬಿಪಿಯಲ್ಲಿ 458 ಕಾನ್ಸ್ಟೇಬಲ್ (ಡ್ರೈವರ್) ಹುದ್ದೆ ಮತ್ತು 81 ಹೆಡ್ಕಾನ್ಸ್ಟೇಬಲ್ (ಮಿಡ್ವೈಫ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳು ಇದಾಗಿದ್ದು, ವಾಹನ ಚಾಲನೆಯಲ್ಲಿ ತರಬೇತಿ ಹೊಂದಿರುವ, ಎಸ್ಎಸ್ಎಲ್ಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಹುದ್ದೆಗಳ ವಿವರ: ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗೆ ಅಧಿಸೂಚನೆ. ಒಟ್ಟು 458 ಹುದ್ದೆಗಳ ಭರ್ತಿಗೆ ಕ್ರಮ.
ವಯೋಮಿತಿ: ವಯೋಮಿತಿ ಕನಿಷ್ಠ 21ರಿಂದ ಗರಿಷ್ಠ 27 ವರ್ಷ. 27-07-1996ಗಿಂತ ನಂತರ ಜನಿಸಿದ ಮತ್ತು ಜುಲೈ 26- 2002ರ ನಂತರ ಜನಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಶಿಕ್ಷಣ ಮಂಡಳಿಯಿಂದ ಎಸ್ಎಸ್ಎಲ್ಸಿ ಶಿಕ್ಷಣ ಪಡೆದಿರಬೇಕು. ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
ಅರ್ಜಿ ಸಲ್ಲಿಕೆ ಹೇಗೆ?: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ.ಜಾ, ಪ.ಪಂ, ನಿವೃತ್ತ ಸೇವಾ ನೌಕರರಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ. ಇತರೆ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ: ಅಭ್ಯರ್ಥಿಗಳ ದೈಹಿಕ ಪರೀಕ್ಷೆ (ಪಿಇಟಿ), ದೈಹಿಕ ಗುಣಮಟ್ಟ ಪರೀಕ್ಷೆ (ಪಿಎಸ್ಟಿ), ಲಿಖಿತ ಪರೀಕ್ಷೆ, ಮೂಲ ಪ್ರತಿಗಳ ಪರಿಶೀಲನೆ, ಪ್ರಾಯೋಗಿಕ ಪರೀಕ್ಷೆ ಮತ್ತು ಮೆಡಿಕಲ್ ಪರೀಕ್ಷೆ ಹಾಗೂ ರಿವ್ಯೂ ಮೆಡಿಕಲ್ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಅರ್ಜಿ ಸಲ್ಲಿಕೆ ಜೂನ್ 27 ರಿಂದ ಆರಂಭವಾಗಿದ್ದು, ಜುಲೈ 27ರವರೆಗೆ ಅವಕಾಶ ನೀಡಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳ ಕುರಿತು ವಿವರವಾದ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ recruitment.itbpolice.nic.in ಈ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದು.
.
ಅಭ್ಯರ್ಥಿಗಳನ್ನು ದೈಹಿಕ ಸಾಮರ್ಥ್ಯ ಪರೀಕ್ಷೆ, ದೈಹಿಕ ಗುಣಮಟ್ಟ ಪರೀಕ್ಷೆ, ಲಿಖಿತ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಡಿಎಂಇ/ ಆರ್ಎಂಇ ಮೂಲಕ ಆಯ್ಕೆ ನಡೆಸಲಾಗುತ್ತದೆ. ಜೂನ್ 9ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕಡೆಯ ದಿನಾಂಕ ಜುಲೈ 8. ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು itbpolice.nic.in ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
ಐಟಿಬಿಪಿಯಲ್ಲಿ ಹೆಡ್ಕಾನ್ಸಟೇಬಲ್ (ಮಿಡ್ವೈಫ್) ಹುದ್ದೆ: ಐಟಿಬಿಪಿಯ ಮತ್ತೊಂದು ಹೊಸ ಅಧಿಸೂಚನೆಯಲ್ಲಿ 81 ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ನೇಮಕಾತಿ ನಡೆಯಲಿದೆ. 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ: ಮಾಸಿಕ 25,500 ರೂ ಯಿಂದ 81,100 ರೂ.ವರೆಗೆ ವೇತನ ನಿಗದಿಯಾಗಿರುವ ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು