ಪ್ರೊಬೆಷನರಿ ಸೇರಿದಂತೆ 500 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ಐಬಿಪಿಎಸ್

ಕೆನರಾ ಬ್ಯಾಂಕ್​, ಬ್ಯಾಂಕ್​ ಆಫ್​ ಇಂಡಿಯಾ, ಬ್ಯಾಂಕ್​​ ಆಫ್​​ ಇಂಡಿಯಾ, ಬ್ಯಾಂಕ್​​ ಆಫ್​ ಮಹಾರಾಷ್ಟ್ರ, ಬ್ಯಾಂಕ್​ ಆಫ್​ ಬರೋಡಾ, ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾ, ಇಂಡಿಯನ್​ ಬ್ಯಾಂಕ್​ ಸೇರಿದಂತೆ ವಿವಿಧ ಬ್ಯಾಂಕ್​ಗಳಲ್ಲಿ ಖಾಲಿ ಇರುವ ಕ್ಲರ್ಕ್​ ಹುದ್ದೆ ನೇಮಕಾತಿಗೆ ಇನ್ಸ್​ಟಿಟ್ಯೂಟ್​ ಆಫ್​ ಬ್ಯಾಂಕಿಂಗ್​ ಪರ್ಸನಲ್​ ಸೆಲೆಕ್ಷನ್ (IBPS) ಒಟ್ಟು 4451 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.ಅದರಲ್ಲಿ ಕೆನರಾ ಬ್ಯಾಂಕ್​ನಲ್ಲಿ ಒಟ್ಟು 500 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಇದೀಗ ವಿಸ್ತರಣೆ ಮಾಡಿ ಹೊಸ ಅಧಿಸೂಚನೆ ಪ್ರಕಟಿಸಲಾಗಿದೆ. ಅದರ ಅನುಸಾರ ಈ ಹುದ್ದೆಗಳಿಗೆ ಆಗಸ್ಟ್​ 28ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಐಬಿಪಿಎಸ್​ನಿಂದ ಒಟ್ಟು 4451 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದರಲ್ಲಿ 500 ಹುದ್ದೆಗಳ ನೇಮಕಾತಿ ಕೆನರಾ ಬ್ಯಾಂಕ್​ಗೆ ನಡೆಯಲಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಧಿಕೃತ ಮಂಡಳಿ ಅಥವಾ ವಿಶ್ವವಿದ್ಯಾಲದಿಂದ ಪದವಿಯನ್ನು ಪಡೆದಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 20 ರಿಂದ ಗರಿಷ್ಠ 30 ವರ್ಷ ವಯೋಮಿತಿ ಹೊಂದಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ₹ 175, ಇತರೆ ಅಭ್ಯರ್ಥಿಗಳು ₹ 850 ಅರ್ಜಿ ಶುಲ್ಕ ಪಾವತಿಸಬೇಕಿದೆ.

ಹುದ್ದೆ ವಿವರ: ಕೆನರಾ ಬ್ಯಾಂಕ್​, ಬ್ಯಾಂಕ್​ ಆಫ್​ ಇಂಡಿಯಾ, ಬ್ಯಾಂಕ್​​ ಆಫ್​​ ಇಂಡಿಯಾ, ಬ್ಯಾಂಕ್​​ ಆಫ್​ ಮಹಾರಾಷ್ಟ್ರ, ಬ್ಯಾಂಕ್​ ಆಫ್​ ಬರೋಡಾ, ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾ, ಇಂಡಿಯನ್​ ಬ್ಯಾಂಕ್​, ಇಂಡಿಯನ್​ ಓವರ್​ಸೀಸ್​ ಬ್ಯಾಂಕ್​, ಪಂಜಾಬ್​ ನ್ಯಾಷನಲ್​ ಬ್ಯಾಂಕ್​, ಪಂಜಾಬ್​ ಮತ್ತು ಸಿಂದ್​​ ಬ್ಯಾಂಕ್, ಯುಕೊ ಬ್ಯಾಂಕ್​, ಯೂನಿಯನ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ನಡೆಯಲಿದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಮೂರು ಹಂತದಲ್ಲಿ ಆಯ್ಕೆ ಮಾಡಲಾಗುವುದು. ಮೊದಲ ಹಂತ ಪ್ರಿಲಿಮನರಿ ಪರೀಕ್ಷೆ, ಎರಡನೇ ಹಂತದಲ್ಲಿ ಮುಖ್ಯ ಪರೀಕ್ಷೆ ಮತ್ತು ಅಂತಿಮವಾಗಿ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಈ ಹುದ್ದೆ ಕುರಿತು ಸಂಪೂರ್ಣ ವಿವರ ಮತ್ತು ಅಧಿಕೃತ ಅಧಿಸೂಚನೆ ವೀಕ್ಷೆಗೆ ಅಭ್ಯರ್ಥಿಗಳು ibps.in ಈ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕಿದೆ. ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು https://ibpsonline.ibps.in/crpcl13jun23/ ಈ ಜಾಲತಾಣಕ್ಕೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೆ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸರಿಯಾಗಿ ಪರಿಶೀಲಿಸಿ ಮುಂದುವರೆಯ ತಕ್ಕದ್ದು. ಸಂಪೂರ್ಣ ಈ ಹುದ್ದೆಗೆ ಅರ್ಜಿ ಸಲ್ಲಿಕೆ ಆಗಸ್ಟ್​​ 1 ರಿಂದ ಆರಂಭವಾಗಿದ್ದು, ಈ ಹಿಂದೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​​ 21 ಎಂದು ಪ್ರಕಟಣೆ ಹೊರಡಿಸಲಾಗಿತ್ತು. ಇದೀಗ ಈ ಅವಧಿಯನ್ನು ಆಗಸ್ಟ್​ 28ರ ವರೆಗೆ ವಿಸ್ತರಣೆ ಮಾಡಲಾಗಿದೆ.