ಉಡುಪಿ: ಪ್ರಸಕ್ತ ಸಾಲಿನಲ್ಲಿ ಕ.ರಾ.ರ.ಸಾ. ನಿಗಮದ ರಿಯಾಯಿತಿ ದರದ ವಿದ್ಯಾರ್ಥಿ ಬಸ್ಪಾಸ್ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in. ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ ಒನ್ ಕೇಂದ್ರಗಳಲ್ಲಿಯೂ ಸಹ ರೂ.30 ಸೇವಾ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರವು ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದ್ದು, ನೆರೆರಾಜ್ಯದಲ್ಲಿ ವಾಸವಿದ್ದು, ಕರ್ನಾಟಕ ರಾಜ್ಯದ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ಸಹ ವಿದ್ಯಾರ್ಥಿ ರಿಯಾಯಿತಿ ಬಸ್ಸ್ ಪಾಸುಗಳನ್ನು ಪಡೆಯಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://ksrtc.karnataka.gov.in/student pass ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಕ.ರಾ.ರ.ಸಾ.ಸಂ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.