ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರೀಡಾ
ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಕ್ರೀಡಾಪಟುಗಳಿಂದ ಏಕಲವ್ಯ ಪ್ರಶಸ್ತಿಗೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ, ಕಳೆದ ಮೂರು ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೋಷಕರಿಂದ, ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.