ನೇತ್ರದೋಷವುಳ್ಳ ವಿದ್ಯಾರ್ಥಿಗಳಿಂದ ಲ್ಯಾಪ್‌ಟಾಪ್- ಬ್ರೈಲ್ ಕಿಟ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ಶೇ.40 ಮತ್ತು ಅದಕ್ಕಿಂತ ಹೆಚ್ಚಿನ ನೇತ್ರದೋಷವುಳ್ಳ ವಿದ್ಯಾರ್ಥಿಗಳಿಂದ ಉಚಿತ ಲ್ಯಾಪ್‌ಟಾಪ್ ಹಾಗೂ ಬ್ರೈಲ್ ಕಿಟ್‌ಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.