ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆ, ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ, ಸರಕು ಸಾಗಾಣಿಕೆ ವಾಹನ ಕೊಳ್ಳಲು ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಒಕ್ಕಲಿಗ ಸಮುದಾಯದ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdc.karnataka.gov.in, ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574882 ಅಥವಾ ಕೇಂದ್ರ ಕಚೇರಿಯ ದೂ.ಸಂಖ್ಯೆ: 080-29904268 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.