ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪೋಷಣ್ ಅಭಿಯಾನ ಯೋಜನೆಯಡಿ ಜಿಲ್ಲಾ ಯೋಜನಾ ಸಹಾಯಕರ -1 ಹುದ್ದೆಗೆ ತಾತ್ಕಾಲಿಕವಾಗಿ ನೇರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪದವಿ ಅಥವಾ ಪೋಸ್ಟ್ ಗ್ರ್ಯಾಜ್ಯುಯೇಟ್ ಡಿಪ್ಲೋಮಾ ಇನ್ ಮ್ಯಾನೆಜ್‌ಮೆಂಟ್/ ಸೋಷಿಯಲ್ ಸೈನ್ಸಸ್/ ನ್ಯೂಟ್ರಿಶನ್ಸ್ ವಿದ್ಯಾರ್ಹತೆ ಹೊಂದಿರುವ, ಸಾಮಾಜಿಕ ವಲಯದಲ್ಲಿ ಸರ್ಕಾರದ ಕಾರ್ಯಕ್ರಮಗಳಾದ ಆರೋಗ್ಯ, ಪೋಷಣೆ, ಶಿಕ್ಷಣ, ನೀರು ಮತ್ತು ನೈರ್ಮಲ್ಯ ಕುರಿತು ಕೆಲಸ ಮಾಡಿದ ಅನುಭವ ಹೊಂದಿರುವ ಹಾಗೂ ಇಂಗ್ಲೀಷ್ ಮತ್ತು ಸ್ಥಳೀಯ ಭಾಷೆಯಲ್ಲಿ ಉತ್ತಮ ಸಂವಹನ ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಒಂದನೇ ಮಹಡಿ, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574978 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮ್ಕಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.