ಮಂಗಳೂರು: ಸರಕಾರಿ ಉಪಕರಣಾಗಾರದಲ್ಲಿ ಇಲೆಕ್ಟ್ರಿಷಿಯನ್ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ : ಮಂಗಳೂರಿನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ನಿರ್ವಹಣಾ ವಿಭಾಗದಲ್ಲಿ ಖಾಲಿ ಇರುವ ಇಲೆಕ್ಟ್ರಿಷಿಯನ್ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಡಿಪ್ಲೋಮಾ ಅಥವಾ ಬಿ.ಇ ಇಲೆಕ್ಟ್ರಿಕಲ್ ಅಂಡ್ ಇಲೆಕ್ಟ್ರಾನಿಕ್ಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 05 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ ವಿಳಾಸ gttcmng@gmail.com ಅನ್ನು ಅಥವಾ ಪ್ರಾಂಶುಪಾಲರು, ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಬೈಕಂಪಾಡಿ ಕೈಗಾರಿಕಾ ವಲಯ, ಮಂಗಳೂರು ಮೊ.ನಂ: 7975621917 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.