ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ವತಿಯಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಠಿಸಲು ಅನುಕೂಲವಾಗುವಂತೆ ಹಾಗೂ ಬಾಲವಿಕಾಸ ಅಕಾಡೆಮಿಯ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳ ಸಾಹಿತ್ಯ, ಯಕ್ಷಗಾನ, ಸಾಂಸ್ಕೃತಿಕ, ಜಾನಪದ, ರಂಗಭೂಮಿ ಅಥವಾ ರಂಗಾಯಣ, ಶಾಸ್ತ್ರೀಯ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಸ್ವ-ವಿವರವುಳ್ಳ ಪ್ರಸ್ತಾವನೆ ಸಲ್ಲಿಸಲು ಮೇ 25 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574972 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.