ಯುವಕರಿಗೆ ಸೇನಾ ತರಬೇತಿ ನೀಡಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಸೇನೆಗೆ ಸೇರಬಯಸುವ ರಾಜ್ಯದ ಯುವ
ಜನತೆಗೆ ಪೂರ್ವಭಾವಿ ತರಬೇತಿಯನ್ನು ನೀಡಲು ಓರ್ವ ಮಾಜಿ ಸೇನಾ ಅಧಿಕಾರಿ ಹಾಗೂ ದೈಹಿಕ ಶಿಕ್ಷಣ ತರಬೇತಿ ಹೊಂದಿರುವ ಮೂರು ಮಾಜಿ ಸೈನಿಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇ-ಮೇಲ್
dydirdswrmlore@gmail.com ಅನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.