ದ್ವಿತೀಯ ಪಿ.ಯುಸಿ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಸ್ಕ್ಯಾನ್ ಮಾಡಲಾದ
ಪ್ರತಿಯನ್ನು ವಿದ್ಯಾರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಲು ಜುಲೈ 15 ರ ವರೆಗೆ ಹಾಗೂ ಮರುಮೌಲ್ಯಮಾಪನ ಮತ್ತು ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 18 ರ ವರೆಗೆ ವಿಸ್ತರಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.