ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಸ್ತ್ರೀರೋಗ, ಅರೆವಳಿಕೆ ಮತ್ತು ಮಕ್ಕಳ ತಜ್ಞರು, ಎಲ್.ಎಚ್.ವಿ, ಡೆಂಟಲ್ ಹೈಜೆನಿಸ್ಟ್, ಆಡಿಯೋ ಮೆಟ್ರಿಕ್ ಆಸಿಸ್ಟೆಂಟ್, ಎಮ್.ಬಿ.ಬಿ.ಎಸ್ ವೈದ್ಯಾಧಿಕಾರಿಗಳು, ಆಯುಷ್ ವೈದ್ಯಾಧಿಕಾರಿಗಳು, ಶುಶ್ರೂಷಕಿ, ಕಿರಿಯ ಪುರುಷ ಆರೋಗ್ಯ ಸಹಾಯಕರು, ಕಿರಿಯ ಮಹಿಳಾ ಆರೋಗ್ಯ ಸಹಾಯಕರು ಹಾಗೂ ಶ್ರವಣ ದೋಷವುಳ್ಳ ಮಕ್ಕಳಿಗೆ ಬೋಧಕೇತರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆಗಸ್ಟ್ 31 ರಂದು ಬೆಳಿಗ್ಗೆ 11 ರಿಂದ 1 ರವರೆಗೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ