ಉಡುಪಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ 2022-23 ನೇ ಸಾಲಿಗೆ ನೀಡಲಾದ ಗುರಿಗಳಿಗೆ ತಕ್ಕಂತೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅರ್ಹ ಆಸಕ್ತ ಫಲಾನುಭವಿಗಳಿಂದ ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ಧಿ, ಕಡಲ ಕೃಷಿ ಮತ್ತು ಕಡಲ ಕಳೆ ಕೃಷಿಗೆ ಸೇರಿದಂತೆ ಸಮುದ್ರ ಮೀನುಗಾರಿಕೆ ಅಭಿವೃದ್ಧಿ, ಅಲಂಕಾರಿಕ ಮತ್ತು ಮನೋರಂಜನೆ ಮೀನುಗಾರಿಕಾ ಅಭಿವೃದ್ಧಿ, ಅಲಂಕಾರಿಕ ಮೀನು/ಅಕ್ವೇರಿಯಂ ಮಾರಾಟ ಮಳಿಗೆ ಸೇರಿದಂತೆ ಚಿಲ್ಲರೆ ಮೀನು ಮಾರಾಟ ಮಳಿಗೆಗಳ ನಿರ್ಮಾಣ , ಆಳಸಮುದ್ರದ ಮೀನುಗಾರಿಕೆಗೆ ಅಭಿವೃದ್ದಿ ಮತ್ತಿತರ ಯೋಜನೆಗಳಿಗೆ ಹಾಗೂ ನೀಲಿಕ್ರಾಂತಿ ಯೋಜನೆಯಡಿ 2018-19 ಮತ್ಯು 2019-20 ರಲ್ಲಿ ಬಾಕಿ ಉಳಿದಿರುವ 10 ಮೀ ಉದ್ದದ ಎಫ್.ಆರ್.ಪಿ ದೋಣಿ ಶಾಖ ನಿರೋಧಕ ಐಸ್ ಮತ್ತು ಮೀನು ಪೆಟ್ಟಿಗೆಗಳು, ಕಡಲಕಳೆ ಕೃಷಿಗಾಗಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮಹಿಳೆಯರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಪೂರ್ಣ ಅರ್ಜಿಗಳನ್ನು ನವೆಂಬರ್ 11 ರ ಒಳಗೆ ಸಂಬಂಧಿಸಿದ ತಾಲೂಕು ಮಟ್ಟದ ಇಲಾಖಾ ಕಛೇರಿಗಳಿಗೆ ಸಲ್ಲಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು, ಉಡುಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ಹೆಚ್ಚಿನ ವಿವರಗಳಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ/ಕಾರ್ಕಳ/ಕುಂದಾಪುರ, ಮೀನುಗಾರಿಕೆ ಉಪನಿರ್ದೇಶಕರು ಉಡುಪಿ ಇವರನ್ನು ಸಂಪರ್ಕಿಸಲು ತಿಳಿಸಿದೆ.