ಸರ್ಟಿಫಿಕೇಟ್ ಇನ್ ಲೈಬ್ರರಿ ಸೈನ್ಸ್ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ವತಿಯಿಂದ ಮಂಗಳೂರಿನ ನಗರ ಕೇಂದ್ರ ಗ್ರಂಥಾಲಯದಲ್ಲಿ ನಾಲ್ಕು ತಿಂಗಳ ಅವಧಿಯ ಸರ್ಟಿಫಿಕೇಟ್ ಇನ್ ಲೈಬ್ರರಿ ಸೈನ್ಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 40 ಅಂಕಗಳೊಂದಿಗೆ ತೇರ್ಗಡೆಯಾದ ಸಾಮಾನ್ಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಶೇ. 35 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ತರಬೇತಿಗಾಗಿ ಅರ್ಜಿ ಸಲ್ಲಿಸಲು ಇಚ್ಛಿಸುವ ಇಲಾಖೆಯ ಡಿ ದರ್ಜೆಯ ಗ್ರಂಥಾಲಯ ಸಹವರ್ತಿಗಳು ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಿರುವ ಸಂಬಂಧಪಟ್ಟ ಉಪನಿರ್ದೇಶಕರು ಅಥವಾ ಮುಖ್ಯ ಗ್ರಂಥಾಲಯಾಧಿಕಾರಿಗಳ ಮೂಲಕ ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಯಿಂದ ಬರುವ ಅಭ್ಯರ್ಥಿಗಳು ಸಂಸ್ಥೆಯ ಮುಖ್ಯಸ್ಥರ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಬಾವುಟಗುಡ್ಡೆ, ಮಂಗಳೂರು ದೂರವಾಣಿ ಸಂಖ್ಯೆ: 0824-2425873 ಅನ್ನು ಸಂಪರ್ಕಿಸುವಂತೆ ಮಂಗಳೂರು ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.