ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ 2021 ರ ಜನವರಿ 1 ರಿಂದ ಡಿಸೆಂಬರ್ 31 ರ ವರೆಗೆ
ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಪ್ರಕಾರಗಳ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿ ಲೇಖಕರು, ಪ್ರಕಾಶಕರು ಹಾಗೂ ಸಂಪಾದಕರಿಂದ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.
ಪುಸ್ತಕಗಳನ್ನು ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಜೆ.ಸಿ. ರಸ್ತೆ, ಬೆಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.