ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ
ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ರಾಷ್ಟ್ರ ಪ್ರಶಸ್ತಿಗೆ ವೆಬ್ಸೈಟ್ www.awards.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಚೇರಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.