ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಉತ್ತರಾಖಂಡ ರಾಜ್ಯದ ಡೆಹರಾಡೂನ್‌ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ 8 ನೇ ತರಗತಿ ಸೇರ್ಪಡೆಗೆ ಪ್ರವೇಶ ಪರೀಕ್ಷೆಯು ಡಿಸೆಂಬರ್ 3 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದ್ದು, ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7 ನೇ ತರಗತಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ, 2023 ಜುಲೈ 1 ಕ್ಕೆ 11 1/2 ರಿಂದ 13 ವರ್ಷ ತುಂಬಿರುವ ಬಾಲಕ ಹಾಗೂ ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ ಅಭ್ಯರ್ಥಿಗಳು 600 ರೂ. ಹಾಗೂ ಎಸ್.ಸಿ.ಎಸ್.ಟಿ ಅಭ್ಯರ್ಥಿಗಳು 555 ರೂ. ಗಳನ್ನು ವೆಬ್‌ಸೈಟ್ www.rimc.gov.in ನಲ್ಲಿ ಆನ್‌ಲೈನ್ ಪಾವತಿ ಮಾಡುವ ಮೂಲಕ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ಭವನ್, ನಂ.58 ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು-25 ಇವರಿಗೆ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459 ಅಥವಾ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.