ಉಡುಪಿ: ಬಿ.ಐ.ಇ.ಆರ್.ಟಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ: 2023-24ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಣ ಯೋಜನೆಯಡಿ ಪ್ರಾಥಮಿಕ ಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದ ಮೇಲೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ಯೋಜನಾ ಸಮನ್ವಯ ಅಧಿಕಾರಿ, ಉಪ ನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಚೇರಿಯನ್ನು ಇದೇ ಸೆ.15ರೊಳಗೆ ಸೂಕ್ತ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಅಭಿಯಾನದ ಉಪನಿರ್ದೇಶಕರು(ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನೆ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.