ರಾಷ್ಟ್ರೀಯ ಯುವ ಸ್ವಯಂಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದ ವತಿಯಿಂದ ರಾಷ್ಟ್ರೀಯ ಯುವ ಸ್ವಯಂಸೇವಕರ ನೇಮಕಾತಿಗೆ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದು, 18-29 ವರ್ಷ ವಯೋಮಿತಿ ಒಳಗಿರಬೇಕು ಹಾಗೂ ಯಾವುದೇ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಾಗಿರಬಾರದು.

ಅರ್ಜಿ ಸಲ್ಲಿಸಲು ಮಾರ್ಚ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್
www.nyks.nic.in ಅಥವಾ ಜಿಲ್ಲಾ ಯುವಜನ ಅಧಿಕಾರಿಗಳು, ನೆಹರು ಯುವ ಕೇಂದ್ರ, ರಜತಾದ್ರಿ, ಜಿಲ್ಲಾಧಿಕಾರಿ ಕಚೇರಿ ಆವರಣ, ಮಣಿಪಾಲ, ಉಡುಪಿ ದೂ.ಸಂಖ್ಯೆ : 0820-2574992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಯುವಜನ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.