ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆಯಲ್ಲಿ ಆಸಕ್ತಿ ಮೂಡಿಸಲು ವಿಜ್ಞಾನ ಮತ್ತು ಪದವಿ ವಿದ್ಯಾರ್ಥಿಗಳಿಗೆ ಡಾ.ಎಸ್.ಕೆ ಶಿವಕುಮಾರ್ ಪ್ರಶಸ್ತಿ, ವಿಜ್ಞಾನ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪ್ರೊ.ಯು.ಆರ್ ರಾವ್ ಪ್ರಶಸ್ತಿ ಹಾಗೂ ಜನಸಾಮಾನ್ಯರ ಆವಿಷ್ಕಾರಗಳಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ [email protected] ಅಥವಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಜಿ.ಕೆ.ವಿ.ಕೆ ಆವರಣ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು ದೂ.ಸಂಖ್ಯೆ: 080-29721550 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.