ಉಡುಪಿ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ
ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಯಡಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತ 18 ವರ್ಷ ಮೇಲ್ಪಟ್ಟ ಯುವಕ-ಯುವತಿಯರಿಂದ ವೆಬ್ಸೈಟ್ http://www.kviconline.gov.in/pmegpeportal/jsp/pmegponline.jsp ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574855 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.