ಉಡುಪಿ: ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಡಿಸೆಂಬರ್ 3ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸುತ್ತಿದ್ದು ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಹಾಗೂ ವೈಯಕ್ತಿಕ ವಿಭಾಗದಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ.
ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಉಡುಪಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಸಿ ಬ್ಲಾಕ್, ತಳಮಹಡಿ, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಛೇರಿ, ರಜತಾದಿ, ಮಣಿಪಾಲ (ದೂರವಾಣಿ ಸಂಖ್ಯೆ: 0820-2574810) ಇವರಿಂದ ಪಡೆದುಕೊಂಡು ಅರ್ಜಿ ನಮೂನೆಯಲ್ಲಿ ಅರ್ಜಿದಾರರ ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಮಾಡಿದ ಸಾಧನೆಗಳ ಬಗ್ಗೆ ಲಗತ್ತಿಸಿದ ಪ್ರಮಾಣ ಪತ್ರಗಳನ್ನು ಕ್ರಮ ಸಂಖ್ಯೆಯೊoದಿಗೆ ನಮೂದಿಸಿ ಸಂಬoಧಿಸಿದ ದಾಖಲೆಗಳನ್ನು ಕಡ್ಡಾಯವಾಗಿ ದ್ವಿಪ್ರತಿಯೊಂದಿಗೆ ಹಾರ್ಡ್ ಮತ್ತು ಸಾಫ್ಟ್ ಕಾಪಿಯೊಂದಿಗೆ ಪ್ರಸ್ತಾವನೆಯನ್ನು ನವೆಂಬರ್ 07ರ ಒಳಗಾಗಿ ಸಲ್ಲಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.















