ಉಡುಪಿ: ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಟೆಲಿವಿಷನ್
ಜರ್ನಲಿಸಂ, ವಿಡಿಯೋ ಜರ್ನಲಿಸಂ, ಕ್ಯಾಮರಮನ್, ನಿರೂಪಣೆ, ವರದಿಗಾರಿಕೆ, ಕಾಪಿ ಎಡಿಟರ್ ಹಾಗೂ ಬುಲೆಟಿಂಗ್ ಪ್ರೊಡ್ಯೂಸರ್ ಕುರಿತು ಬೆಂಗಳೂರಿನಲ್ಲಿ ನಡೆಯಲಿರುವ ತರಬೇತಿಗೆ ಪರಿಶಿಷ್ಟ ಜಾತಿಯ ಅರುಂಧತಿಯಾರ್, ಭಂಗಿ, ಮೆಹತರ್, ಓಲ್ಗಾನ, ರೂಖಿ, ಮಲ್ಕಾನ, ಹಲಾಲ್‌ಕೋರ್, ಲಾಲ್‌ಬೇಗಿ, ಬಾಲ್ಮಿಕಿ, ಕೊರರ್, ಜಾಡ್‌ಮಾಲಿ ಬಾಂಬಿ, ಭಾಂಭಿ, ಅಸಾದರು, ಅಸೋಡಿ, ಚಮ್ಮಡಿಯ, ಚಮ್ಮಾರ್, ಚಂಭಾರ್, ಚಮಗಾರ್, ಹರಳಯ್ಯ, ಹರಲಿ, ಖಲ್ಪ, ಮಚ್‌ಗಾರ್, ಮೋಚಿಗಾರ್, ಮಾದರ್, ಮಾದಿಗ್, ಮೋಚಿ,
ಮೂಚಿ, ತೆಲುಗುಮೋಚಿ, ಕಾಮಟಿಮೋಚಿ, ರಾಣಿಗರ್, ರೋಹಿದಾಸ್, ರೋಹಿತ್, ಸಮಗಾರ್, ಬಿಂಡ್ಲಾ, ಚಕ್ಕಿಲಿಯನ್, ದಕ್ಕಲ್ ದೊಕ್ಕಲ್‌ವಾರ್, ದಕ್ಕಲಿಗ, ಡೋರ್, ಕಕ್ಕಯ್ಯ, ಕನ್‌ಕಯ್ಯ ಜಾಂಬುವುಲ, ಮಾಚಾಲ, ಮಾದಿಗ, ಮಾಂಗ್, ಮಾತಂಗ್, ಮಿನಿ ಮಾದಿಗ್, ಮಾಂಗ್‌ಗಾರುಡಿ, ಮಾಂಗ್‌ಗಾರೋಡಿ, ಮಾಷ್ಟಿ ಸಮಗಾರ ಸಿಂದೊಲ್ಲು, ಚಿಂದೊಲ್ಲು ಇತ್ಯಾದಿ ಉಪಜಾತಿಗೆ ಸೇರಿದ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.