ಉಡುಪಿ: ರಾಷ್ಟೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವಿವಿಧ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ರಾಷ್ಟೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿಯಿರುವ ಹೆರಿಗೆ ತಜ್ಞರು-01 ಹುದ್ದೆ, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರದಲ್ಲಿ 5 ಹಾಗೂ ಕಾರ್ಕಳದಲ್ಲಿ 1 ಸೇರಿದಂತೆ ಒಟ್ಟು ವೈದ್ಯಾಧಿಕಾರಿಗಳು-06 ಹುದ್ದೆ, ಆಡಿಯೋಮೆಟ್ರಿಕ್ ಅಸಿಸ್ಟೆಂಟ್ -01 ಹುದ್ದೆ, ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ಯಂಗ್ ಹಿಯರಿಂಗ್ ಇಂಪೈರಡ್ ಚಿಲ್ಡ್ರನ್ ಇನ್ಸ್ ಟ್ರಕ್ಟರ್ -01 ಹುದ್ದೆ ಹಾಗೂ ಉಡುಪಿಯ ನಗರ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಎಲ್.ಹೆಚ್.ವಿ-1 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 16 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯೋಜನಾ ನಿರ್ವಹಣಾ
ಘಟಕ, ರಾಷ್ಟೀಯ ಆರೋಗ್ಯ ಅಭಿಯಾನ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು
ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.