ಕೇಂದ್ರ ಸರ್ಕಾರದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅರ್ಹ ಅಭ್ಯರ್ಥಿಗಳು https://ssc.nic.in ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಜೂನ್ 16 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಅಗತ್ಯವಾದ ಮಾರ್ಗದರ್ಶನವನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು, ಅನುಮಾನಗಳಿದ್ದಲ್ಲಿ ಸಹಾಯವಾಣಿ 080- 25502520, 9483862020 ಅನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಮೊ.ನಂ. 9945856670, 8105618291 ಮತ್ತು 8197440155 ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.