ಕ್ರೀಡಾ ಇಲಾಖೆಯ ವಿವಿಧ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉಡುಪಿ: 2025 ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ನೀಡಲಾಗುವ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ, ನಗದು ಪುರಸ್ಕಾರ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, 2025-26 ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆ, 2025-26 ನೇ ಸಾಲಿನ ವಿದ್ಯಾರ್ಥಿ ವೇತನ ಯೋಜನೆ ಹಾಗೂ 2026-27 ನೇ ಸಾಲಿನ ಗುರಿ ಒಲಂಪಿಕ್ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ವೆಬ್‌ಸೈಟ್ https://sevasindhu.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೇಲ್ಕಂಡ ಪ್ರಶಸ್ತಿ ಹಾಗೂ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅಥವಾ ಯುವ ಸಹಾಯವಾಣಿ ಸಂಖ್ಯೆ: 155265 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವoತೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.