ಉಡುಪಿ: ಗ್ರಾಮಾಂತರ ಕೈಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆಕೆಲಸ, ಮರಗೆಲಸ, ದೋಬಿ, ಕಮ್ಮಾರಿಕೆ, ಪ್ಲಂಬರ್, ಎಲೆಕ್ಟ್ರಿಷಿಯನ್, ಕ್ಷೌರಿಕ, ಬ್ಯೂಟಿಪಾರ್ಲರ್ ಹಾಗೂ ಟೈಲರಿಂಗ್ ವೃತ್ತಿಯ ಗರಿಷ್ಟ ರೂ.8,000/- ಮೊತ್ತದ ವಿದ್ಯುತ್‌ಚಾಲಿತ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಉಪಕರಣಗಳನ್ನು ಪಡೆಯಲಿಚ್ಛಿಸುವ ಗ್ರಾಮೀಣ ಪ್ರದೇಶದ ಅರ್ಜಿದಾರರು ಆನ್‌ಲೈನ್ ವೆಬ್‌ಸೈಟ್ udupi.nic.in ನಲ್ಲಿ ನಮೂದಿಸಿದ ಲಿಂಕ್‌ನ ಮುಖಾಂತರ ಅರ್ಜಿಗಳನ್ನು ಭರ್ತಿ ಮಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ದೃಢೀಕರಣದೊಂದಿಗೆ ಜುಲೈ 10 ರಿಂದ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ವ್ಯಾಪ್ತಿಯ ಕುಶಲಕರ್ಮಿಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ. ಅರ್ಜಿದಾರರು ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯ ಮೂಲ ಪ್ರತಿಯನ್ನು ಉಪ ನಿರ್ದೇಶಕರು, ಗ್ರಾಮಾಂತರ ಕೈಗಾರಿಕೆ, “ಬಿ ಬ್ಲಾಕ್”, # ನಂ.207, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ಕಛೇರಿಗೆ ತಪ್ಪದೇ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂ.ಸಂಖ್ಯೆ: 0820-2574915 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಗ್ರಾಮಾಂತರ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

















