ಯುವ ಸಂವಾದ-ಭಾರತ @2047: ಸುಮುದಾಯ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದ ವತಿಯಿಂದ ಜಿಲ್ಲೆಯಲ್ಲಿ ಏಪ್ರಿಲ್ ನಿಂದ ಮೇ 31 ರವರೆಗೆ ಯುವ ಸಂವಾದ- ಭಾರತ @2047 ಕಾರ್ಯಕ್ರಮ ಆಯೋಜಿಸಲು, ಸಮುದಾಯ ಆಧಾರಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವಜನ ಅಧಿಕಾರಿಗಳು, ನೆಹರು ಯುವ ಕೇಂದ್ರ, ರಜತಾದ್ರಿ, ಜಿಲ್ಲಾಧಿಕಾರಿ ಕಚೇರಿ ಆವರಣ, ಮಣಿಪಾಲ, ಉಡುಪಿ, ದೂ.ಸಂಖ್ಯೆ: 0820-2574992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.