ಉಡುಪಿ: ಮೈಸೂರಿನ ರಂಗಾಯಣ ಸಂಸ್ಥೆಯ ವತಿಯಿಂದ ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ
ಹಾಗೂ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ನಾಟಕ ಶಾಲೆಯ ಪದವಿ ಪಡೆದಿರುವ, ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಲ್ಲಿ ರಂಗಶಿಕ್ಷಣ ಪದವಿ ಅಥವಾ ಡಿಪ್ಲೋಮಾ ಪಡೆದಿರುವ 22 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನ.
ಜುಲೈ 20 ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿನ ರಂಗಾಯಣದಲ್ಲಿ ಸಂದರ್ಶನ ನಡೆಯಲಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.rangayana.org, ನಿರ್ದೇಶಕರು, ರಂಗಾಯಣ, ವಿನೋಬಾ ರಸ್ತೆ, ಮೈಸೂರು ದೂ.ಸಂಖ್ಯೆ: 0821-2512639 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.