ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಪ್ರಶಸ್ತಿ ಯೋಜನೆಯಡಿ ಭತ್ತದ ಬೆಳೆ ಸ್ಪರ್ಧೆಗೆ ರೈತ ಹಾಗೂ ರೈತ ಮಹಿಳೆಯರಿಂದ ಪ್ರತ್ಯೇಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಯ್ಕೆ ಮಾಡಲಾದ ಬೆಳೆಗಳಲ್ಲಿ ಬೆಳೆ ಸ್ಫರ್ಧೆ ನಡೆಸಿ ಪ್ರತಿ ಹಂತದಲ್ಲಿ 3 ಬಹುಮಾನಗಳನ್ನು ನೀಡಲಾಗುತ್ತಿದ್ದು, ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಭತ್ತದ ಬೆಳೆಯಲ್ಲಿ ರೈತರು ಹಾಗೂ ರೈತ ಮಹಿಳೆಯರು ವಿವಿಧ ಹಂತದ ಬೆಳೆ ಸ್ಫರ್ಧೆಗೆ ನಿಗದಿತ ಪ್ರವೇಶ ಶುಲ್ಕವನ್ನು ಪಾವತಿಸಿ, ಪಹಣಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಗುರುತಿನ ಚೀಟಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಗಳೊಂದಿಗೆ ಆಗಸ್ಟ್ 31 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.