ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸಲು 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಇಲಾಖೆಯ ವೆಬ್ಸೈಟ್ www.sw.kar.nic.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 26 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.












