ಬೀದಿ ನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2022-23ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ ತಂಡದಲ್ಲಿ 8 ಜನ ಕಲಾವಿದರಿರಬೇಕು. ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದ ಕಲಾವಿದರಾಗಿರಬೇಕು ಮತ್ತು ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಒಬ್ಬರು ಮಹಿಳೆ ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಠ ಪಂಗಡಕ್ಕೆ ಸೇರಿದವರಾಗಿರಬೇಕು.

ಆಸಕ್ತ ಕಲಾತಂಡಗಳು ಅಕ್ಟೋಬರ್ 17 ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಾಯರ್‌ಕೆರೆ, ಬ್ರಹ್ಮಗಿರಿ, ಉಡುಪಿ-576101 ಇಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9964141590 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.