ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮ
ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ
ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಹಾಗೂ ಸಾಂಪ್ರದಾಯಿಕ /ಕುಶಲಕರ್ಮಿ ವೃತ್ತಿದಾರರ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಸುವಿಧಾ ತಂತ್ರಾಂಶ https://suvidha.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಪ್ರವರ್ಗ 2ಎ ರಲ್ಲಿನ ಮಡಿವಾಳ ಮತ್ತು ಇದರ ಉಪಜಾತಿಗೆ ಸೇರಿದವರ ಕುಲಕಸುಬು / ಸಾಂಪ್ರದಾಯಿಕ ವೃತ್ತಿಗಳಾದ ದೋಭಿ ಘಟಕ, ಡ್ರೈ ಕ್ಲೀನಿಂಗ್ ಘಟಕಗಳ ಸ್ಥಾಪನೆ, ಇಸ್ತ್ರಿ ಮಾಡುವಿಕೆ ಮುಂತಾದ ಸಾಂಪ್ರದಾಯಿಕ ವೃತ್ತಿಗಳನ್ನು ಹಾಗೂ ಕೌಶಲ್ಯತೆ ಹೊಂದಿರುವ ವೃತ್ತಿಗಳನ್ನು ಕೈಗೊಳ್ಳಲು ಸಾಲ ಮತ್ತು ಸಹಾಯಧನದ ನೆರವು ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kmmd.karnataka.gov.in ಸಹಾಯವಾಣಿ ಸಂಖ್ಯೆ: 080-22374832, 9606066389 ಅಥವಾ 0820-2574882 ಅನ್ನು ಸಂಪರ್ಕಿಸಬಹುದಾಗಿದೆ.
ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ
ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು, ಹಿಂದುಳಿದ ವರ್ಗಗಳ ಪ್ರವರ್ಗ-1 ರಲ್ಲಿ ಬರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜಾತಿ ಹಾಗೂ ಅದರ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸುವಿಧಾ ತಂತ್ರಾಂಶ https://suvidha.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kaad.karnataka.gov.in, ಸಹಾಯವಾಣಿ ಸಂಖ್ಯೆ: 080-22374832, 9606066389 ಅಥವಾ 0820-2574882 ಅನ್ನು ಸಂಪರ್ಕಿಸಬಹುದಾಗಿದೆ.
ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ
ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಂಪ್ರದಾಯಿಕ/ ಕುಶಲಕರ್ಮಿ ವೃತ್ತಿದಾರರ ಸಾಲ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗದ ಪ್ರವರ್ಗ 2ಎ ರಲ್ಲಿನ ಸವಿತಾ ಸಮಾಜಕ್ಕೆ ಸೇರಿದ ಅರ್ಹ ಫಲಾನುಭವಿಗಳಿಂದ ಸುವಿಧಾ ತಂತ್ರಾಂಶ https://suvidha.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kssd.karnataka.gov.in , ಸಹಾಯವಾಣಿ ಸಂಖ್ಯೆ: 080-22374832, 9606066389 ಅಥವಾ 0820- 2574882 ಅನ್ನು ಸಂಪರ್ಕಿಸಬಹುದಾಗಿದೆ.
ಪಶುಪಾಲನಾ ಇಲಾಖೆ
ಪಶುಪಾಲನಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶೇ.90 ಸಹಾಯಧನದಲ್ಲಿ ಕೌ ಮ್ಯಾಟ್ ವಿತರಿಸಲು ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಹೈನುಗಾರರು ಹಾಗೂ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಕಾರ್ಕಳ ಮತ್ತು ಹೆಬ್ರಿ ತಾಲೂಕು ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ.