ಉಡುಪಿ: ನೆಹರು ಯುವ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಯುವಕ-ಯುವತಿ ಮಂಡಳಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ನೋಂದಾಣಾಧಿಕಾರಿಗಳ ಕಚೇರಿಯಲ್ಲಿ ನೋಂದಾವಣೆಯಾಗಿ, ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರುವ, 2021 ಏಪ್ರಿಲ್ 1 ರಿಂದ 2022 ಮಾರ್ಚ್ 31 ರ ಒಳಗೆ ಗ್ರಾಮ, ಪಟ್ಟಣ ಮತ್ತು ತಾಲೂಕು ಅಭಿವೃದ್ಧಿಗಾಗಿ ಜನಪರ ಕಾರ್ಯಕ್ರಮಗಳನ್ನು ನಡೆಸಿರುವ ಜಿಲ್ಲೆಯ ಯುವಕ-ಯುವತಿ ಮಂಡಳಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ಯುವ ಮಂಡಳಗಳು 25,000 ರೂ. ಪ್ರಶಸ್ತಿ ಪತ್ರದ ಜೊತೆಗೆ ರಾಜ್ಯ ಮಟ್ಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲು ಅರ್ಹತೆ ಪಡೆದುಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಮನ್ವಯಾಧಿಕಾರಿ, ನೆಹರು ಯುವ ಕೇಂದ್ರ, ಜಿಲ್ಲಾಧಿಕಾರಿ ಕಚೇರಿ ಆವರಣ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.