ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಉಡುಪಿ ಜಿಲ್ಲಾ ಕಚೇರಿಗೆ 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 15 ಸಾವಿರ ರೂಗಳ ಸ್ಟೈಪಂಡ್ ನೀಡಲಾಗುವುದು. ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು 35 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನ. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ನಾಯರ್ ಕೆರೆ, ಉಡುಪಿ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












