ಅನಗತ್ಯ ರಸ್ತೆ ಅಗೆತ ಮಾಡಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಜಾರಿ

ಉಡುಪಿ: ಈಗಾಗಲೇ ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆ, ಉಡುಪಿ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಯಾವುದೇ ರಾಜ್ಯ ಹೆದ್ದಾರಿ/ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಹಾಗೂ ಅಕ್ಕಪಕ್ಕದಲ್ಲಿ ಅಗೆತ ಮಾಡುವುದನ್ನು ಅಕ್ಟೋಬರ್ ಅಂತ್ಯದವರೆಗೆ ನಿಷೇಧಿಸಲಾಗಿದೆ.

ರಸ್ತೆ ಅಗೆತಕ್ಕೆ ಈಗಾಗಲೇ ಇಲಾಖೆಯಿಂದ ಅನುಮತಿ ನೀಡಲಾಗಿದ್ದರೂ ಸುರಕ್ಷತಾ ದೃಷ್ಠಿಯಿಂದ ಅಕ್ಟೋಬರ್ ಅಂತ್ಯದವರೆಗೆ ರಸ್ತೆ ಹಾಗೂ ರಸ್ತೆ ಬದಿಯಲ್ಲಿ ಯಾವುದೇ ಅಗೆತವನ್ನು ನಿಷೇಧಿಸಿದೆ ಮತ್ತು ಅಕ್ಟೋಬರ್ ಅಂತ್ಯದವರೆಗೆ ಯಾವುದೇ ಅನುಮತಿ ನೀಡಲಾಗುವುದಿಲ್ಲ.

ಅನಗತ್ಯವಾಗಿ ರಸ್ತೆ ತುಂಡರಿಸುವುದು, ಅಗೆತ ಮಾಡುವುದು ಕಂಡುಬಂದಲ್ಲಿ ಅಂಥವಹ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರವರ ಕಚೇರಿ ಪ್ರಕಟಣೆ ತಿಳಿಸಿದೆ.