ಎ.13ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ 

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಎ.13ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದು, ಈಗಾಗಲೇ ಎಲ್ಲ ರೀತಿಯ ಸಿದ್ಧತೆಗೆಗಳು ನಡೆದಿದೆ.
ಪ್ರಧಾನಿ ಮೋದಿ ಅವರು ಅಪರಾಹ್ನ 2.45ಕ್ಕೆ ಮಧುರೈಯಿಂದ ವಿಶೇಷ ವಿಮಾನದಲ್ಲಿ ಹೊರಡಲಿದ್ದು, ಸಂಜೆ 4 ಗಂಟೆಗೆ ಮಂಗಳೂರು ವಿಮಾನ‌ ನಿಲ್ದಾಣ ತಲುಪಲಿದ್ದಾರೆ. ಅನಂತರ ಕೇಂದ್ರ ಮೈದಾನಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಲಿದ್ದಾರೆ. ಸಭೆಯ ಬಳಿಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
ನಗರದಲ್ಲಿ ಬಿಗಿ ಬಂದೋಬಸ್ತ್
ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ನಗರದಾದ್ಯಂದ ಬಂದೋಬಸ್ತ್ ಏರ್ಪಡಿಸಲಾಗಿದೆ. ನಗರದಲ್ಲಿ 5 ಎಸ್‌ಪಿ/ಡಿಸಿಪಿ, 10 ಡಿವೈಎಸ್‌ಪಿ/ಎಸಿಪಿ, 36 ಪಿಐಗಳು, 67 ಪಿಎಸ್‌ಐ, 147 ಎಎಸ್‌ಐ, 1,207 ಎಚ್ಸಿ/ಪಿಸಿ ಸಹಿತ ಒಟ್ಟು 1,472 ಪೊಲೀಸ್‌ ಅಧಿಕಾರಿ, ಸಿಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಅಲ್ಲದೇ 4 ಎಎಸ್‌ಸಿ ತಂಡ, 1 ಬಿಡಿಎಸ್‌ ತಂಡ, 30 ಡಿಎಫ್‌ಎಂಡಿ/ 30 ಎಚ್ಎಚ್ಎಂಡಿಯನ್ನು ವಿವಿಧ ಸ್ಥಳಗಳಲ್ಲಿ ತಪಾಸಣೆಗೆ ನೇಮಿಸಲಾಗಿದೆ ಹಾಗೂ ಎಲ್ಲ ರೀತಿಯ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ.