ಎ.22: ಪುತ್ತಿಗೆ ಮಠದ ಶಿಷ್ಯಸ್ವೀಕಾರ ಸಮಾರಂಭ   

ಉಡುಪಿ: ಜಗದ್ಗುರು ಶ್ರೀ ಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಮದುಪೇಂದ್ರ ತೀರ್ಥ ಶ್ರೀ ಪಾದರ 750 ವರ್ಷಗಳ ಗುರುಪರಂಪರೆಯಲ್ಲಿ ಮೂವತ್ತನೇ ಯತಿಗಳಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಹನ್ನೆರಡನೇ ವಯಸ್ಸಿನಲ್ಲಿ ಬಾಲಸನ್ಯಾಸವನ್ನು ಸ್ವೀಕರಿಸಿ ವಿಶ್ವದಾದ್ಯಂತ ಧರ್ಮಪ್ರಸಾರ ಮಾಡುವ ಮೂಲಕ ಏ. 22ರಂದು 45 ಸಂವತ್ಸರಗಳನ್ನು ಪೂರೈಸಲಿದ್ದಾರೆ.
ಈ ಶುಭ ಸಂದರ್ಭದಲ್ಲಿ ಶ್ರೀಗಳು ಶ್ರೀ ಪ್ರಶಾಂತ ಆಚಾರ್ಯ ಎಂಬ ವಟುವನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಸ್ವೀಕರಿಸಲು ಸಂಕಲ್ಪಿಸಿದ್ದು, ಈ ಸಂಬಂಧ ಹಿರಿಯಡ್ಕ ಸಮೀಪದ ಶ್ರೀ ಪುತ್ತಿಗೆ ಗ್ರಾಮದಲ್ಲಿರುವ ಶ್ರೀ ಪುತ್ತಿಗೆ ಮಠದ ಮೂಲ ಮಠದಲ್ಲಿ ನಾಳೆ 11-45 ಕ್ಕೆ ಸರಳ ಸಮಾರಂಭ ಜರಗಲಿದೆ. ಈ ಸಮಾರಂಭಕ್ಕೆ ಶ್ರೀ ಮಠದ ಶಿಷ್ಯರು ಅಭಿಮಾನಿಗಳು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಠದ ಆಡಳಿತ ಮಂಡಳಿ ಪ್ರಕಟನೆ ತಿಳಿಸಿದೆ.