ಚೆನ್ನೈ: ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯ (ಕೂನೂರು ಬಳಿ) ಪತನಗೊಂಡಿದ್ದು, ಈವರೆಗೆ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮೃತಪಟ್ಟವರ ವಿವರ ಇನ್ನು ಲಭ್ಯವಾಗಿಲ್ಲ.
ಗಂಭೀರವಾಗಿ ಗಾಯಗೊಂಡ ಮೂವರನ್ನು ನೀಲಗಿರೀಸ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣೆ ಮಾಡಿದವರಲ್ಲಿ ಬಿಪಿನ್ ರಾವತ್ ಕೂಡ ಒಬ್ಬರಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.
ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಜನರನ್ನು (ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು ಎನ್ನಲಾಗಿದೆ.