ಉಡುಪಿ: ಸೇನಾ ಹೆಲಿಕಾಪ್ಟರ್ ಪತನವಾಗಿರುವುದು ಆಘಾತವಾಗಿದೆ. ದೇಶದ ಸುರಕ್ಷತೆಯ ದೃಷ್ಟಿಯಿಂದ ಇದು ಗಂಭೀರವಾದ ವಿಷಯವಾಗಿದೆ. ಹೀಗಾಗಿ ಹೆಲಿಕಾಪ್ಟರ್ ಪತನ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸುಪ್ರೀಂಕೋರ್ಟ್ ಹಿರಿಯ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದರು.
ಉಡುಪಿ ಕೃಷ್ಣಮಠದಲ್ಲಿ ಬುಧವಾರ ನಡೆದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.