ಉಡುಪಿ: ಇಂದು ಬೆಳಿಗ್ಗೆ ವಿಧಿವಶರಾದ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಅಂತಿಮ ದರ್ಶನಕ್ಕೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನದ ವರೆಗೆ ಅಂತಿಮ ದರ್ಶನ ನಡೆಯಲಿದೆ. ಮಧ್ಯಾಹ್ನದ ಅನಂತರ ಪಾರ್ಥೀವ ಶರೀರವನ್ನು ಬೆಂಗಳೂರಿಗೆ ಕೊಂಡೊಯ್ಯಲಾಗುವುದು.
ಬೆಂಗಳೂರಿನ ನ್ಯಾಷನಲ್ ಕಾಲೇಜ್ ಗ್ರೌಂಡ್ ನಲ್ಲಿ ಸಾರ್ವಜನಿಕ ದರ್ಶನ ನಡೆಯಲಿದೆ. ಆ ಬಳಿಕ ಶ್ರೀನಗರದ ಸಮೀಪ ಇರುವ ವಿದ್ಯಾಪೀಠದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ತಿಳಿದುಬಂದಿದೆ.